ಬೆಂಗಳೂರು:(ಜು.18): ರಾಜ್ಯದ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸುತ್ತಿರುವ ಬೆನ್ನಲಿಯೇ ವಿಧಾನಸೌಧದ ಸುತ್ತ-ಮುತ್ತ ಪೊಲೀಸರ ಸರ್ಪಗಾವಲನ್ನು ಹಾಕಲಾಗಿದೆ.

ವಿಧಾನಸೌಧದ ಎಲ್ಲಾ ಗೇಟ್ ಬಳಿಯೂ ಮತ್ತು ಸೌಧದ ದ್ವಾರಗಳ ಬಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸುತ್ತ-ಮುತ್ತ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಕೆಎಸ್‍ಆರ್‍ಪಿ, ಸಿಎಆರ್ ತುಕುಡಿ, ಕ್ಷಿಪ್ರ ಕಾರ್ಯಾಚರಣೆ ಪಡೆಯನ್ನು ನೇಮಕ ಮಾಡಿ, ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ.