ಗಿರೀಶ್ ಕಾರ್ನಾಡ್ ಅವರಿಗೆ ಬಹುತೇಕ ಕ್ಷೇತ್ರಗಳಲ್ಲಿ ಹಲವಾರು ಪ್ರಶಸ್ತಿಗಳು ಲಭಿಸಿವೆ.

ಕಾರ್ನಾಡ್ ಅವರು ರಚಿಸಿದ ಸಾಹಿತ್ಯಗಳಿಗೆ, 1972 ರಲ್ಲಿ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ ಮತ್ತು ವರ್ತೂರ್ ನವ್ಯ ಪ್ರಶಸ್ತಿ, 1974 ರಲ್ಲಿ ಪದ್ಮಶ್ರೀ ಪ್ರಶಸ್ತಿ, 1992 ರಲ್ಲಿ ಪದ್ಮಭೂಷಣ ಪ್ರಶಸ್ತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ಪ್ರಶಸ್ತಿ, 1994 ರಲ್ಲಿ ಸಾಹಿತ್ಯ ಅಕಾಡಮಿ ಪ್ರಶಸ್ತಿ, 1998 ರಲ್ಲಿ ಜ್ಞಾನಪೀಠ ಪ್ರಶಸ್ತಿ ಹಾಗೂ ಕಾಳಿದಾಸ ಸನ್ಮಾನ, ರಾಜ್ಯೋತ್ಸವ ಪ್ರಶಸ್ತಿ ಇನ್ನೂ ಹಲವಾರು ಪ್ರಶಸ್ತಿಗಳು ಲಭಿಸಿವೆ.

ಕಾರ್ನಾಡ್ ಅವರು ಚಿತ್ರರಂಗದಲ್ಲೂ ಸಹ ಅಭಿನಯಿಸಿ, ನಿರ್ದೇಶಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 1971 ರಲ್ಲಿ ‘ವಂಶ ವೃಕ್ಷ’ ಚಿತ್ರವನ್ನು ನಿರ್ದೇಶಿಸಿ ಉತ್ತಮ ನಿರ್ದೇಶಕ ಪ್ರಶಸ್ತಿ, ಕನ್ನಡದ ‘ಕಾಡು’ ಎಂಬ ಚಿತ್ರವನ್ನು ನಿರ್ದೇಶಿಸಿ 1974 ರಲ್ಲಿ ಉತ್ತಮ ನಿರ್ದೇಶಕ ಪ್ರಶಸ್ತಿ, ಕನ್ನಡದಲ್ಲಿ ‘ಒಂದಾನೊಂದು ಕಾಲದಲ್ಲಿ’ ಎಂಬ ಚಿತ್ರವನ್ನು ನಿರ್ದೇಶಿಸಿ 1978 ರಲ್ಲಿ ಉತ್ತಮ ನಿರ್ದೇಶಕ ಪ್ರಶಸ್ತಿ, ಕನ್ನಡದ ‘ಆನಂದ ಭೈರವಿ’ ಚಿತ್ರದಲ್ಲಿ ಅಭಿನಯಿಸಿ ಉತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನಾಟಕ ರಂಗದಲ್ಲೂ ಸಹ ಸೇವೆ ಸಲ್ಲಿಸಿರುವ ಇವರಿಗೆ ‘ಗುಬ್ಬಿ ವೀರಣ್ಣ ಪ್ರಶಸ್ತಿ’ ಇನ್ನೂ ಹತ್ತು ಹಲವಾರು ಪ್ರಶಸ್ತಿಗಳು ಲಭಿಸಿವೆ.