ಮೈಸೂರು(ಜೂ:12): ನನಗೆ ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯುತವಾಗಿ ನಿರ್ವಹಿಸುತ್ತೇನೆ. ಆದರೆ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು ಎಂದು ಶಾಸಕ ಅಡಗೂರು ವಿಶ್ವನಾಥ್ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವ ಅಧಿಕಾರ ಸಿಎಂ ಕುಮಾರಸ್ವಾಮಿ ಅವರ ಕೈಯಲ್ಲಿದೆ. ಅಕಸ್ಮಾತ್ ನನಗೆ ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯುತವಾಗಿ ನಿರ್ವಹಿಸುತ್ತೇನೆ ಎಂದಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಮತ್ತೆ ಪಡೆಯುವ ಪ್ರಶ್ನೆಯೇ ಇಲ್ಲ. ಪಕ್ಷದಲ್ಲಿ ಸಮರ್ಥ ಯುವಕರಿದ್ದಾರೆ. ಯುವಕರಿಗೆ ಅವಕಾಶ ನೀಡಿ ಎಂದು ವರಿಷ್ಠರಿಗೆ ಹೇಳಿದ್ದೇನೆ. ನನ್ನ ಕ್ಷೇತ್ರದಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದೇನೆ. ನನ್ನ ಊರಿನ ಸರ್ವತೋಮುಖ ಅಭಿವೃದ್ಧಿಯೇ ಮುಂದಿನ ಗುರಿ ಎಂದು ತಿಳಿಸಿದ್ದಾರೆ.