ಬೆಂಗಳೂರು(ಮೇ.30) ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷೇತರ ಸುಮಲತಾ ಅಂಬರೀಶ್ ವಿರುದ್ಧ ಸೋಲು ಅನುಭವಿಸಿದ್ದ ನಿಖಿಲ್ ಕುಮಾರಸ್ವಾಮಿ ಫಲಿತಾಂಶದ ಬಳಿಕ ಮೊದಲ ಬಾರಿ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಯಾರನ್ನು ಟೀಕಿಸುವುದು ಬೇಡ, ಟೀಕಿಸುವುದಿದ್ದರೇ ನನ್ನನ್ನೇ ಟೀಕಿಸಿ. ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ನನಗೆ ಪ್ರತಿಸ್ಪರ್ಧಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ಸುಮಲತಾರವರಿಗೆ ಶುಭಾಶಯಗಳನ್ನು ಕೋರುತ್ತೇನೆ ಎಂದರು.

ಇನ್ನೊಂದೆಡೆ ನನ್ನ ಗೆಳೆಯ ಅಭಿಷೇಕ್ ಮೊದಲ ಚಿತ್ರ ನಾಳೆ ಬಿಡುಗಡೆಯಾಗಲಿದೆ. ಚಿತ್ರಕ್ಕೆ ಶುಭವಾಗಲಿ, ಎಲ್ಲರೂ ಚಿತ್ರಮಂದಿರಕ್ಕೆ ಹೋಗಿ ಚಿತ್ರವನ್ನು ನೋಡುವಂತೆ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಯಾರೇ ಗೆಲ್ಲಲಿ ಜಿಲ್ಲೆಯ ಅಭಿವೃದ್ಧಿಗೆ ನಾವು ಎಲ್ಲರೂ ಕೈ ಜೋಡಿಸಬೇಕಾಗಿದೆ. ಮುಂದೆಯು ನಾನು ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ದುಡಿಯುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ನುಡಿದರು.