ಅಮರಾವತಿ(ಡಿ.24) ಇಡೀ ದೇಶದಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ನಾನು ಯಾವುದೇ ಕಾರಣಕ್ಕೂ ಬೆಂಬಲಿಸುವುದಿಲ್ಲ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಹೇಳಿದ್ದಾರೆ.

ದೇಶದಲ್ಲಿ ಪೌರತ್ವ ಕಾಯ್ದೆ ಪರ ಮತ್ತು ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದು ನಮ್ಮ ರಾಜ್ಯದಲ್ಲಿ ನಾನು ಯಾವುದೇ ಕಾರಣಕ್ಕೂ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ.

“ಕಡಪದಲ್ಲಿ ಮಾತನಾಡಿದ ಸಿಎಂ ಜಗನ್ ಮೋಹನ್ ರೆಡ್ಡ, ನನ್ನ ಅಲ್ಪಸಂಖ್ಯಾತ ಸಹೋದರರು ಎನ್‌ಆರ್‌ಸಿ ಕುರಿತು ನನ್ನ ನಿಲುವನ್ನು ತಿಳಿಸುವಂತೆ ಕೇಳಿದ್ದಾರೆ. ನಾವು ಎನ್‌ಆರ್‌ಸಿಯನ್ನು ವಿರೋಧಿಸುತ್ತೇವೆ ಮತ್ತು ಆಂಧ್ರಪ್ರದೇಶ ಯಾವುದೇ ಸಂದರ್ಭದಲ್ಲೂ ನಾವು ಅದನ್ನು ಬೆಂಬಲಿಸುವುದಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದರು.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಮಾತ್ರವಲ್ಲದೆ ಇತರ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ತಮ್ಮ ರಾಜ್ಯದಲ್ಲಿ ಎನ್‌ಆರ್‌ಸಿಯನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬಂಗಾಳದ ಮಮತಾ ಬ್ಯಾನರ್ಜಿ, ಬಿಹಾರದ ನಿತೀಶ್ ಕುಮಾರ್, ಇಡಿಸ್ಸಾದ ನವೀನ್ ಪಟ್ನಾಯಕ್, ಪಂಜಾಬ್ ನ ಅಮರಿಂದರ್ ಸಿಂಗ್,

ಮಧ್ಯಪ್ರದೇಶದ ಕಮಲ್ ನಾಥ್ ರಾಜಸ್ಥಾನದ ಅಶೋಕ್ ಗೆಹ್ಲೋಟ್ ಮತ್ತು ಕೇರಳದ ಪಿಣರಾಯಿ ವಿಜಯನ್ ತಮ್ಮ ರಾಜ್ಯದಲ್ಲಿ ಎನ್‌ಆರ್‌ಸಿಯನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ.