ಮಂಡ್ಯ(ಜೂನ್.18) ಗಿಮಿಕ್ ಗಾಗಿ ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿಕೆಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು , ನಾನು ಗಿಮಿಕ್ ಗಾಗಿ ಗ್ರಾಮ ವಾಸ್ತವ್ಯವನ್ನು ಮಾಡುತ್ತಿಲ್ಲ. ನಾನು ಎಲ್ಲಾ ಜಿಲ್ಲಾಧಿಕಾರಿಗಳಿಂದ ಎಲ್ಲಾ ಗ್ರಾಮಗಳ ಮಾಹಿತಿಯನ್ನು ಪಡೆಯುತ್ತಿದ್ದೇನೆ. ಇದನ್ನು ಗಿಮಿಕ್ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಬಿಜೆಪಿಯವರು ಗ್ರಾಮ ವಾಸ್ತವ್ಯ ಬೇಡ, ಬರ ಪರಿಹಾರ ಮಾಡಿ ಎಂದು ಹೇಳುತ್ತಿದ್ದಾರೆ. ರೈತರ ಸಮಸ್ಯೆಗಳು ಏನು ಎನ್ನುವುದು ನನಗೆ ಗೊತ್ತಿದೆ, ನಾನು ಸ್ಟಾರ್ ಹೋಟೆಲ್ ನೋಡಿದ್ದೀನಿ ಹಾಗೆ ಸಣ್ಣ ಹಳ್ಳಿಯಲ್ಲಿಯೂ ವಾಸ್ತವ್ಯ ಹೂಡಿದ್ದೀನಿ ಎಂದು ಹೇಳಿದರು.

ಸೆಲ್ಫಿ ವೀಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ ಸುರೇಶ್ ಮನೆಗೆ ಭೇಟಿ ನೀಡಿ ಸಿಎಂ ಕುಮಾರಸ್ವಾಮಿಯವರು ಕುಟುಂಬದವರಿಗೆ ಸಾಂತ್ವನ ಹೇಳಿ ಪರಿಹಾರ ವಿತರಣೆ ಮಾಡಿದರು.