ಬೆಂಗಳೂರು(ಏ:03): ನನಗೆ ವಂಶಪಾರಂಪರ್ಯ ರಾಜಕಾರಣ ಇಷ್ಟವಾಗುವುದಿಲ್ಲ, ಅದಕ್ಕಾಗಿಯೇ ನಾನು ಕಾಂಗ್ರೆಸ್ ಬಿಟ್ಟು ಬಂದೆ, ನನಗೆ ಯಾವ ಅಧಿಕಾರವೂ ಬೇಕಾಗಿಲ್ಲ,ಭಾರತ ದೇಶಕ್ಕೆ ನರೇಂದ್ರ ಮೋದಿ ಅವರ ಅವಶ್ಯಕತೆ ಇದೆ, ಈಗ ನಡೆಯುತ್ತಿರುವುದು ಒಕ್ಕಲಿಗರ ಸಂಘದ ಚುನಾವಣೆಯಲ್ಲ,ಲೋಕಸಭಾ ಚುನಾವಣೆ ಎಂದು ಮಾಜಿ ಕೇಂದ್ರ ಸಚಿವ ಎಸ್.ಎಂ ಕೃಷ್ಣ ಹೇಳಿದ್ದಾರೆ.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ ಇದ್ದಾಗ ಪೂರ್ಣ ಪ್ರಮಾಣದ ಸಹಕಾರ ಸಿಗುತ್ತಿತ್ತು, ಆದರೆ, ಕಾಂಗ್ರೆಸ್ ಪಕ್ಷದಲ್ಲಿ ಈಗ ಅಂತಹ ಬೆಳವಣಿಗೆಯ ವಾತಾವರಣ ಇಲ್ಲ, ಹೀಗಾಗಿ ಪಕ್ಷ ತೊರೆದು ಬಂದೆ ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು.

ನಾನು ಸಮ್ಮಿಶ್ರ ಸರ್ಕಾರದ ವಿರೋಧಿ, ಕಾಂಗ್ರೆಸ್ ವಿರೋಧಿ, ಜೆಡಿಎಸ್ ವಿರೋಧಿ, ಹಾಗಾಗಿ ಮಂಡ್ಯದಲ್ಲಿ ನಾನು ಯಾವ ನಿಲುವು ತೆಗೆದುಕೊಳ್ಳಬಹುದು ಎಂಬುದು ನಿಮ್ಮ ಊಹೆಗೆ ಬಿಟ್ಟಿದ್ದು ಎಂದು ಪ್ರಶ್ನಿಸಿದರು.