ಬೆಂಗಳೂರು(ಮಾ:18): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರವಾಗಿ ಕಣಕ್ಕಿಳಿಯುತ್ತೇನೆಂದು ಸುಮಲತಾ ಅಂಬರೀಶ್ ಘೋಷಿಸಿದ್ದಾರೆ. ಮಂಡ್ಯ ಕ್ಷೇತ್ರದ ಜನತೆ ನನ್ನ ಕೈಬಿಡುವುದಿಲ್ಲ ಎಂಬ ವಿಶ್ವಾಸದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಈಗಾಗಲೇ ನಾವು ಪ್ರಚಾರ ನಡೆಸುತ್ತಿದ್ದು,ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು. ಅಂಬರೀಶ್ ಅವರ ಕನಸನ್ನು ನನಸು ಮಾಡಲು ನಾನು ಚುನಾವಣೆಗೆ ಸ್ಪರ್ಧಿಸುತ್ತಿರುವಾಗಿ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಖ್ಯಾತ ನಟರಾದ ದರ್ಶನ್,ಯಶ್,ಹಿರಿಯ ನಟ ದೊಡ್ಡಣ್ಣ ಇನ್ನೂ ಮುಂತಾದವರು ಹಾಜರಿದ್ದರು.