ನವದೆಹಲಿ:(ಜ,29) ಮೋದಿ ಅವರು ‘ಮೇಕ್ ಇನ್ ಇಂಡಿಯಾ’ ಬಗ್ಗೆ ಮಾತನಾಡುತ್ತಿದ್ದರೆ, ರಾಹುಲ್ ಅವರು ‘ಬ್ರೇಕ್ ಇನ್ ಇಂಡಿಯಾ’ ದಲ್ಲಿ ನಿರತರಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಹಿಮಾಚಲ ಪ್ರದೇಶದ ಉನಾನಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಇರುವುದು ಗಾಂಧಿ ಕುಟುಂಬಕ್ಕಾಗಿಯೇ ಹೊರತು ದೇಶಕ್ಕಾಗಿ ಅಲ್ಲ, ಜೆಎನ್‍ಯು ನಲ್ಲಿ ದೇಶವಿರೋಧಿ ಘೋಷಣೆ ಕೂಗಿದವರ ಬೆನ್ನನ್ನು ರಾಹುಲ್ ಗಾಂಧಿ ತಟ್ಟುತ್ತಿದ್ದಾರೆ. ಆದರೆ ದೇಶವನ್ನು ಒಡೆಯಲು ಪ್ರಯತ್ನಿಸಿದರೆ ನಾವು ಸುಮ್ಮನೆ ಕೂರುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರವು ಬಡವರ ಬಂದು ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ ಕಾಂಗ್ರೆಸ್ ನಲ್ಲಿ ರಾಹುಲ್ ಮತ್ತು ಪ್ರಿಯಾಂಕಾ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಅವರು ತಮ್ಮ ಭಾಷಣಗಳಲ್ಲಿ ಬಡತನದ ಬಗ್ಗೆ ಮಾತನಾಡುತ್ತಾರೆ ಆದರೆ 55 ವರ್ಷಗಳಿಂದ ಕಾಂಗ್ರೆಸ್ ಆಡಳಿತದಲ್ಲಿದೆ ಏಕೆ ಅವರು ಬಡತನ ನಿರ್ಮೂಲನೆ ಮಾಡಲಿಲ್ಲ ಎಂದು ಪ್ರಶ್ನಿಸಿರುವ ಶಾ ಭಾರತಕ್ಕೆ ಸುಭದ್ರವಾದ ಸರ್ಕಾರ ಬೇಕೇ ಹೊರತು ಅವಕಾಶವಾದಿ ಸರ್ಕಾರ ಬೇಕಿಲ್ಲ ಎಂದು ಹೇಳಿದ್ದಾರೆ.