ಬೆಂಗಳೂರು(ಜ:15): ನಾನು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ,ಬಿಜೆಪಿ ಪಕ್ಷದವರು ಯಾರೂ ನನ್ನನ್ನು ಸಂಪರ್ಕಿಸಿಲ್ಲ ಎಂದು ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಯಾವ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ,ಯಾವ ಬಿಜೆಪಿ ನಾಯಕರೂ ನನ್ನನು ಸಂಪರ್ಕಿಸಿಲ್ಲ,ಒಂದು ವೇಳೆ ಸಂಪರ್ಕಿಸಿದರೂ ನಾನು ಪಕ್ಷ ಬಿಟ್ಟು ಹೋಗುವುದಿಲ್ಲ ಎಂದಿದ್ದಾರೆ.

ಬಿಜೆಪಿಯವರು ನಡೆಸುತ್ತಿರುವ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ಪಕ್ಷ ತೊರೆದು ಹೋಗುವವರನ್ನು ಮತ್ತೆ ಕರೆತರುವ ತಾಕತ್ತು ನಮಗಿದೆ ಎಂಬುದನ್ನು ಸಚಿವರಾದ ಡಿ.ಕೆ ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ,ಪಕ್ಷದ ಅತೃಪ್ತ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು ಸುಖಾಸುಮ್ಮನೆ ಸುಳ್ಳು ಸುದ್ದಿಗಳನ್ನು ಬಿಜೆಪಿಯವರು ಹರಡುತ್ತಿದ್ದಾರೆ ಎಂದು ಹೇಳಿದ್ದಾರೆ.