ಬೆಂಗಳೂರು(ಮಾ:21) : ಶುಕ್ರವಾರ ದೆಹಲಿಗೆ ತೆರಳಬೇಕಾಗಿದ್ದ ಮಾಜಿ ಸಿಎಂ, ಸಮನ್ವಯ ಸಮಿತಿಯ ಮುಖ್ಯಸ್ಥ ಸಿದ್ದರಾಮಯ್ಯ, ಹೈಕಮಾಂಡ್ ತುರ್ತು ಬುಲಾವ್ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನವೇ ದೆಹಲಿಗೆ ಹೊರಟಿದ್ದಾರೆ.

ಇಂದು ನಡೆಯಬೇಕಾಗಿದ್ದ, ಹಾಸನ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯನ್ನು ಸಿದ್ದರಾಮಯ್ಯ ಶನಿವಾರಕ್ಕೆ ಮುಂದೂಡಿದ್ದಾರೆ. ಗುರುವಾರ ಸಂಜೆ, ಸ್ಕ್ರೀನಿಂಗ್ ಕಮಿಟಿ ಸಭೆಯನ್ನು ಕಾಂಗ್ರೆಸ್ ಹೈಕಮಾಂಡ್ ಆಯೋಜಿಸಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಿಂದ ಸುಮಲತಾ ಅಂಬರೀಶ್ ಕಣಕ್ಕಿಳಿಯುತ್ತಿದ್ದು,ಬುಧವಾರ ನಾಮಪತ್ರವನ್ನು ಸಲ್ಲಿಸಿದ್ದರು. ಕಣ್ಣು ಹಾಯಿಸಿದಷ್ಟು ದೂರ ಸೇರಿದ್ದ ಜನಸಾಗರದ ನಡುವೆ ಸುಮಲತಾ ನಾಮಪತ್ರ ಸಲ್ಲಿಸುವ ಮುನ್ನ ನಡೆದ ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಜರಾಗಿದ್ದರು.