ನವದೆಹಲಿ(ಮಾ:18): ಪಾಕಿಸ್ತಾನದ ಜೈಷೆ ಎ ಮೊಹಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಝರ್ ನನ್ನು ಜಾಗತಿಕ ಉಗ್ರನ ಪಟ್ಟಿಗೆ ಸೇರಿಸಲು ಭಾರತ ಸೇರಿ ಎಲ್ಲಾ ರಾಷ್ಟ್ರಗಳೊಂದಿಗೆ ಚರ್ಚಿಸಲು ಸಿದ್ಧವಿರುವುದಾಗಿ ಚೀನಾ ತಿಳಿಸಿದೆ.

ವಿಶ್ವಸಂಸ್ಥೆಯ ಕಾಯಂ ಸದಸ್ಯತ್ವದ ರಾಷ್ಟ್ರಗಳಾದ ಅಮೆರಿಕಾ, ಫ್ರಾನ್ಸ್ ಹಾಗೂ ಇಂಗ್ಲೆಂಡ್ ದೇಶಗಳು ಚೀನಾದ ಮನ ಒಲಿಸಿ, ಮಸೂದ್ ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿಸಲು ಒತ್ತಡ ಹೇರುತ್ತಿರುವ ಬೆನ್ನಲ್ಲೇ, ಈ ಬಗ್ಗೆ ಚರ್ಚೆ ನಡೆಸುವುದಾಗಿ ಚೀನಾ ತಿಳಿಸಿದೆ.

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ತನ್ನದೇ ಕೃತ್ಯವೆಂದು ಜೈಷೆ ಮೊಹಮ್ಮದ್ ಸಂಘಟನೆಯು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಮಸೂದ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಚೀನಾ, ಭಾರತ ಸಹಿತ ಇತರೆ ರಾಷ್ಟ್ರಗಳೊಂದಿಗೆ ಮಾತುಕತೆಗೆ ಒಪ್ಪಿಕೊಂಡಿದೆ.