ನವದೆಹಲಿ(ಜ:07):ಮುಂಬರುವ ಶೈಕ್ಷಣಿಕ ವರ್ಷದಿಂದ ನವೋದಯ ವಿದ್ಯಾಲಯಗಳಲ್ಲಿ 5000 ಸೀಟುಗಳನ್ನು ಹೆಚ್ಚಳ ಮಾಡಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಕೇಂದ್ರ ಸರ್ಕಾರದ ವತಿಯಿಂದ ನಡೆಸುತ್ತಿರುವ ಈ ವಸತಿ ಶಾಲೆಗಳಲ್ಲಿ ಸದ್ಯಕ್ಕೆ 46,600 ಸೀಟುಗಳಿದ್ದು,ಪ್ರಸ್ತಕ ಶೈಕ್ಷಣಿಕ ವರ್ಷದಿಂದ ಒಟ್ಟು 51,000 ಸೀಟುಗಳು ಆಗಲಿವೆ ಎಂದಿದ್ದಾರೆ.

2019ರ ಶೈಕ್ಷಣಿಕ ವರ್ಷಕ್ಕೆ ನಡೆಸುವ ಪ್ರವೇಶ ಪರೀಕ್ಷೆಗೆ 31 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣೆ ಮಾಡಿಕೊಂಡಿದ್ದು ಇದು ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯುವ ಆಕಾಂಕ್ಷೆಯನ್ನು ಸೂಚಿಸಿದಂತಾಗಿದೆ,ವಿದ್ಯಾರ್ಥಿಗಳಿಗೆ ಅವಕಾಶ ನೀಡಲು ಹಾಗೂ ನೆರವಾಗಲು ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ ಎಂದರು.