ಪರ್ತ್(ಡಿ.19): ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ಇಶಾಂತ್ ಶರ್ಮಾ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ ಪರಸ್ಪರ ಕಿತ್ತಾಡಿಕೊಂಡಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನು ಅನುಭವಿ ಹಾಗೂ ಹಿರಿಯ ಆಟಗಾರರು ಮೈದಾನದಲ್ಲಿಯೇ ಕಿತ್ತಾಡಿಕೊಂಡಿದ್ದು ಟೀ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಪ್ರಶ್ನೆ ಮೂಡಿದೆ.

ಕ್ಷೇತ್ರ ರಕ್ಷಣೆ ವಿಚಾರವಾಗಿ ಜಡೇಜಾ ಹಾಗೂ ಇಶಾಂತ್ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತು ಮಗಿಸಿ ಮುಂದೆ ಹೋಗಿದ್ದ ಇಶಾಂತ್ ಮತ್ತೆ ಜಡೇಜಾ ಕಡೆ ತಿರುಗಿ ಬೆರಳು ಮಾಡಿ ಜಗಳಕ್ಕೆ ಇಳಿದಿದ್ದಾರೆ. ಈ ವೇಳೆ ಕೂಡಲೇ ಮೊಹಮ್ಮದ್ ಶಮಿ ಹಾಗೂ ಕುಲದೀಪ್ ನೋಡಿ ತಕ್ಷಣವೇ ಅಲ್ಲಿಗೆ ಬಂದು ಇಬ್ಬರನ್ನು ಸಮಾಧಾನ ಪಡಿಸಿದ್ದಾರೆ.