ಬೆಂಗಳೂರು(ಮಾ:15): ಬೆಂಗಳೂರಿನ ಖಾಸಗಿ ಹೋಟೆಲ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆನಂದ್ ರಾವ್ ವೃತ್ತದ ಬಳಿ ಇರುವ ರಾಜಮಹಲ್ ಹೋಟೆಲ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಹೋಟೆಲ್ ನ ಕೊಠಡಿಯಲ್ಲಿ ಕೂಡಿಟ್ಟಿದ್ದ 2 ಕೋಟಿ ರೂ. ಗಳನ್ನು ವಶಕ್ಕೆ ಪಡೆದಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ನಾರಾಯಣಗೌಡ ಬಿ ಪಾಟೀಲ್ ಅವರು ಹೋಟೆಲ್ ನಲ್ಲಿ ಮೂರು ರೂಮ್ ಬುಕ್ ಮಾಡಿದ್ದರು,ಈ ಮಾಹಿತಿಯನ್ನು ಸಂಗ್ರಹಿಸಿದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ದಾಳಿಯ ವೇಳೆ 500 ರೂ. ಹಾಗೂ 2000 ರೂ. ನೋಟುಗಳ 2 ಕೋಟಿ ರೂ ಗಳನ್ನು ಸಂಗ್ರಹಮಾಡಿರುವುದು ತಿಳಿದುಬಂದಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಣ ಸಂಗ್ರಹಣೆ ಮಾಡಿರಬಹುದು ಎಂದು ಶಕಿಸಲಾಗಿದ್ದು,ಐಟಿ ದಾಳಿಯ ಮಾಹಿತಿ ತಿಳಿಯುತ್ತಿದ್ದಂತೆ ನಾರಾಯಣಗೌಡ ಬಿ ಪಾಟೀಲ್ ಸ್ಥಳದಿಂದ ಪರಾರಿಯಾಗಿದ್ದಾರೆ.