ಕಡೂರು(ಏ:04): ರಾಜ್ಯದಲ್ಲಿ ಕಳೆದ 10 ತಿಂಗಳಿನಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಹೊಂದಾಣಿಕೆಯಿಂದ ಸರ್ಕಾರ ನಡೆಸುತ್ತಿದ್ದು, ಯಾವುದೇ ಅಭಿವೃದ್ದಿ ಕಾರ್ಯಗಳು ನಡೆದಿರುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಕುಟುಂಬ ರಾಜಕಾರಣಕ್ಕೆ ಮತ್ತು ಭ್ರಷ್ಟಚಾರಕ್ಕೆ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ತಿಳಿಸಿದರು.

ಕಡೂರು ತಾಲ್ಲೂಕಿನ ಸಖರಾಯಪಟ್ಟಣ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಸರ್ಕಾರದ ಪ್ರಾರಂಭದಲ್ಲಿ ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸಲಾಗಿದೆ ಈಗ ಲೋಕಸಭಾ ಚುನಾವಣಾ ಅಭ್ಯರ್ಥಿಯಾಗಲು ಪೈಪೋಟಿ ನಡೆಸಿ ಎರಡೂ ಪಕ್ಷಗಳಲ್ಲಿ ಒಮ್ಮತವಿಲ್ಲದೆ ಸರ್ಕಾರದಲ್ಲಿ ಯಾವುದೇ ಕಾರ್ಯಗಳು ನಡೆದಿರುವುದಿಲ್ಲ. ಇದೊಂದು ಡೊಂಗಿ ಮೈತ್ರಿಯಾಗಿದೆ ಎಂದು ಟೀಕಿಸಿದರು.

ಈ ಸರ್ಕಾರಕ್ಕೆ ಭವಿಷ್ಯವಿಲ್ಲ. ಇವರಿಗೆ ಬರಗಾಲದ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲ. ಕೇಂದ್ರ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದೆ ಕೋಟ್ಯಾಂತರರೂ ಅನುದಾನ ವಾಪಸ್ ಆಗಿದೆ ಎಂದರು.