ಬೆಂಗಳೂರು(ಜುಲೈ.04) ಕೆಲವು ದಿನಗಳ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ಅವರು ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷ ಮತ್ತು ಜೆಡಿಎಸ್ ಯುವ ಘಟಕದ ಸ್ಥಾನದ ನೇಮಕ ಮಾಡಲಿದ್ದು ಜೆಡಿಎಸ್ ವರಿಷ್ಠ ಹೆಚ್. ಡಿ.ದೇವೇಗೌಡರು ಇಂದು ಅಧಿಕೃತ ಘೋಷಣೆ ಮಾಡಲಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಸನ ಜಿಲ್ಲೆಯ ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್.ಕೆ,ಕುಮಾರಸ್ವಾಮಿಯವರು ಹಾಗೂ ಕಾರ್ಯಾಧ್ಯಕ್ಷರ ಹುದ್ದೆಗೆ ಮಧು ಬಂಗಾರಪ್ಪ ಅವರನ್ನು ಆಯ್ಕೆಯಾಗಿದ್ದಾರೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಮಧ್ಯಾಹ್ನ ಪಕ್ಷದ ಕಚೇರಿಯಲ್ಲಿ ದೇವೇಗೌಡರು ಘೋಷಣೆ ಮಾಡಲಿದ್ದಾರೆ.

ಶೇಷಾದ್ರಿಪುರಂನ ಜೆ.ಪಿ ಭವನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ನೂತನ ಅಧ್ಯಕ್ಷರಿಗೆ ಬಾವುಟ ನೀಡುವುದರ ಮೂಲಕ ಅಧಿಕಾರ ಹಸ್ತಾಂತರಿಸಲಿದ್ದಾರೆ.