ಬೆಂಗಳೂರು (ಫೆ.21): ವಿಜಯನಗರ ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣದಲ್ಲಿ ಕಂಪ್ಲಿ ಶಾಸಕ ಗಣೇಶ್‍ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಆದೇಶವನ್ನು ನೀಡಲಾಗಿದೆ.
ಈ ಕುರಿತು ವಿಚಾರಣೆ ನಡೆಸಿದ ರಾಮನಗರ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅವರಿಗೆ 14 ದಿನಗಳ ಕಾಲ ಸೆರೆವಾಸ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ವಿಚಾರಣೆ ಬಳಿಕ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಾಸಕ ಗಣೇಶ್ ಇರಲಿದ್ದಾರೆ.

ಹಲ್ಲೆ ಬಳಿಕ ನಾಪತ್ತೆಯಾಗಿದ್ದ ಕಂಪ್ಲಿಶಾಸಕ ಗಣೇಶ್‍ನನ್ನು ನಿನ್ನೆ ಗುಜರಾತ್‍ನಲ್ಲಿ ಪೊಲೀಸರು ಬಂಧಿಸಿದ್ದರು. ಅವರನ್ನು ಇಂದು ಮುಂಜಾನೆಗೆ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದ ಪೊಲೀಸರು ಬಿಡದಿ ಪೊಲೀಸ್ ಠಾಣೆಗೆ ಹಾಜರು ಪಡಿಸಿದ್ದರು. ಬಳಿಕ ರಾಮನಗರ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿತ್ತು.

ಇನ್ನು ಶಾಸಕ ಗಣೇಶ್‍ಗೆ ಜಾಮೀನು ಸಿಗುವುದು ಕೂಡ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲಾ ಕೋರ್ಟ್?ಗೆ ಅರ್ಜಿ ಸಲ್ಲಿಸುವುದಿಲ್ಲ. ನಾಳೆ ಜನತಾಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಗಣೇಶ್ ಪರ ವಕೀಲ ಹನುಮಂತರಾಯ ತಿಳಿಸಿದ್ದಾರೆ

ಇನ್ನು ಶಾಸಕರು ಅಸ್ತಮದಿಂದ ಬಳಲುತ್ತಿದ್ದಾರೆ. ಅನಾರೋಗ್ಯದ ಹಿನ್ನಲೆಯಿಂದಾಗಿ ಪರಪ್ಪನ ಅಗ್ರಹಾರ ಜೈಲು ಕೊಡಿ. ಸೆಕ್ಷನ್ 167 ರಡಿ ವೈದ್ಯಕೀಯ ಚಿಕಿತ್ಸೆ ಎಂದು ಮನವಿ ಮಾಡಿದ್ದರು. ಅದರಂತೆ ಪರಪ್ಪನ ಅಗ್ರಹಾರ ಜೈಲಿಗೆ ಅವರನ್ನು ಕಳುಹಿಸಲಾಗಿದೆ.