ಬೆಂಗಳೂರು(ಫೆ.05) : ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಾಡಿಸಿದೆ.

ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ್ ಯಾದವ್ ಅವರನ್ನು ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನೇಮಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಯಾಗಿರುವ ಟಿ.ಕೆ.ಅನಿಲ್‍ಕುಮಾರ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿರುವ ಶಿವಯೋಗಿ ಕಳಸದ್ ಅವರು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ವರ್ಗಾವಣೆಗೊಂಡಿದ್ದು, ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಕುಮಾರ್ ಪುಷ್ಕರ್ ಅವರ ವರ್ಗಾವಣೆಯಿಂದ ತೆರವಾಗಿರುವ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಹುಬ್ಬಳ್ಳಿ ಧಾರವಾಡ ಎಸ್‍ಪಿವಿ ವ್ಯವಸ್ಥಾಪಕ ನಿರ್ದೇಶಕರಾದ ಹೆಫ್ಸಿಬಾ ರಾಣಿ ಕೊರ್ಲಪಾಟಿ ಅವರು ಉಡುಪಿ ಜಿಲ್ಲೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಇನ್ನು ಈ ಎಲ್ಲಾ ಅಧಿಕಾರಿಗಳು ಮುಂದಿನ ಆದೇಶದವರೆಗೆ ಇದೆ ಹುದ್ದೆಯಲ್ಲಿ ಮುಂದುವರೆಯಲ್ಲಿದ್ದಾರೆ.