ಬೆಂಗಳೂರು(ಜೂನ್.08) ಮಹರಾಷ್ಟ್ರ ಮತ್ತು ಕರ್ನಾಟಕದ ನಡುವೆ ಉಂಟಾಗಿರುವ ಕೃಷ್ಟ ನದಿನೀರು ಹಂಚಿಕೆಯ ವಿಚಾರವಾಗಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ಸಭೆಯನ್ನು ಕರೆಯುವಂತೆ ಸಿಎಂ ಕುಮಾರಸ್ವಾಮಿ ರಾಜ್ಯಪಾಲರಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ.

ಸಿಎಂ ಕುಮಾರಸ್ವಾಮಿಯವರ ಮನವಿಗೆ ರಾಜ್ಯಪಾಲ ವಜೂಬಾಯಿ ವಾಲಾ ಅವರು ಪುರಸ್ಕರಿಸಿದ್ದಾರೆ. ಶೀಘ್ರದಲ್ಲಿಯೇ ಮಹರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗ ಳ ನಡುವೆ ಸಭೆಯನ್ನು ಕರೆಯುವುದಾಗಿ ಭರವಸೆಯನ್ನು ನೀಡಿದ್ದಾರೆ.