ಬೆಂಗಳೂರು(ಜು:18): ವಿಧಾನಮಂಡಲ ಕಲಾಪ ಆರಂಭಗೊಂಡಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ವಿಶ್ವಾಸ ಮತಯಾಚನೆ ಪ್ರಸ್ತಾಪವನ್ನು ಮಂಡಿಸಿದರು.

ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಈ ಹಿಂದೆ ನಡೆದ ಹಲವು ವಿಶ್ವಾಸ ಮತಯಾಚನೆ ಪ್ರಸಂಗವನ್ನು ಪ್ರಸ್ತಾಪಿಸಿ, ಆದಷ್ಟು ಬೇಗ ಪ್ರಕ್ರಿಯೆಯನ್ನು ಮುಗಿಸುವಂತೆ ಸ್ಪೀಕರ್ ಅವರನ್ನು ಮನವಿ ಮಾಡಿದರು.

ಯಡಿಯೂರಪ್ಪ ಅವರ ಮಾತಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಯಡಿಯೂರಪ್ಪ ತುಂಬಾ ಅವಸರದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಭಿನ್ನಮತೀಯ ಶಾಸಕರು ತಾವು ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ತಮಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಅವರು ಸುಪ್ರೀಂ ಕೋಟ್‌ನಲ್ಲಿ ಹೋಗಿ ಬೇರೇನೋ ಮಾತನಾಡಿದ್ದಾರೆ. ನನ್ನ ಮೇಲೆ ಹಲವಾರು ಆರೋಪಗಳನ್ನು ಮಾಡಿದ್ದಾರೆ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.