ಬೆಂಗಳೂರು(ಜು:06): ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನಲೆಯಲ್ಲಿ ಅಮೆರಿಕಾ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಒಂದು ದಿನ ಮುಂಚಿತವಾಗಿಯೇ ಭಾರತಕ್ಕೆ ವಾಪಾಸ್‌ ಬರುತ್ತಿದ್ದಾರೆಂದು ತಿಳಿದುಬಂದಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿರುವ ಕುಮಾರಸ್ವಾಮಿ, ಈಗಾಗಲೇ ನ್ಯೂಜೆರ್ಸಿಯಿಂದ ನ್ಯೂಯಾರ್ಕ್‌ ಗೆ ತೆರಳುತ್ತಿದ್ದಾರೆಂದು ಹೇಳಲಾಗಿದೆ. ನ್ಯೂಯಾರ್ಕ್‌ ನಿಂದ ನವದೆಹಲಿಗೆ ಬರಲಿರುವ ಸಿಎಂ ಬಳಿಕ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸಹ ವಿದೇಶದಲ್ಲಿದ್ದು, ಅವರೂ ಸಹಾ ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಾರೆಂದು ಹೇಳಲಾಗಿದೆ.