ಬೆಳಗಾವಿ(ಆ:10): ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹೀಗಾಗಿ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ತಾರತಮ್ಯ ನೀತಿ ಅನುಸರಿಸದೇ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.

ನಾನು ಜ್ವರದಿಂದ ಬಳಲುತ್ತಿದ್ದೇನೆ, ಇನ್ನೂ ಸಂಪೂರ್ಣ ಚೇತರಿಸಿಕೊಂಡಿಲ್ಲ. ಆದರೆ, ಪ್ರವಾಹ ಪೀಡಿತ ಜನರ ಸಂಕಷ್ಟ ಕಂಡು ಮನೆಯಲ್ಲಿ ಕೂರಲು ಸಾಧ್ಯವಾಗಿಲ್ಲ.ಹಾಗಾಗಿ ಇಂದು ನಾನು ಬೆಳಗಾವಿಗೆಯಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ನಾಳೆ ಕೊಡುಗಿಗೆ ಹೋಗುತ್ತೆನೆ ಎಂದರು.