ನವದೆಹಲಿ(ಏ.03): ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು ಕೇಂದ್ರದಲ್ಲಿ ಗದ್ದುಗೆಯನ್ನು ಏರಲು ಎಲ್ಲಾ ರಾಜಕೀಯ ಪಕ್ಷದ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಈ ನಡುವೆ ಒಂದು ಅಘಾತಕಾರಿ ಮಾಹಿತಿ ಹೊರಬಿದ್ದಿದ್ದು ದೇಶದ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಹೌದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರ್ಯಾಲಿ ವೇಳೆ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ವಿಚಾರ ತಿಳಿದುಬಂದಿದೆ. ರಾಹುಲ್ ಅವರಿಗೆ ಉತ್ತರ ಪ್ರದೇಶದ ಅಮೇಥಿಯಲ್ಲಿ ಅಪಾಯವಿದೆ ಎಂದು ಕಾಂಗ್ರೆಸ್. ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದೆ.

ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ 7 ಬಾರಿ ಅವರ ಮೇಲೆ ಲೇಸರ್ ಗ್ರೀನ್ ಲೈಟ್ ಬಿದ್ದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನು . ಈ ಬಗ್ಗೆ ತನಿಖೆ ನಡೆಸಬೇಕು ಹಾಗೂ ರಾಹುಲ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ತಿಳಿಸಲಾಗಿದೆ. ಲೇಸರ್ ಗ್ರೀನ್ ಲೈಟ್ ರಾಹುಲ್ ಗಾಂಧಿ ಅವರ ತಲೆ ಮೇಲೆ ಸುಮಾರು 7 ಬಾರಿ ಅತಿ ಕಡಿಮೆ ಅವಧಿಯಲ್ಲಿ ಬಿದ್ದಿರುವುದು ದೃಢವಾಗಿದೆ. ಹಾಗೂ ಇದಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಕೂಡ ಕಾಂಗ್ರೆಸ್, ಗೃಹ ಸಚಿವಾಲಯಕ್ಕೆ ಪತ್ರದೊಂದಿಗೆ ನೀಡಿದೆ.