ಬಾದಾಮಿ(ಜೂ 28): ಬಾದಾಮಿಯಲ್ಲಿ ವಾಸ್ತವ್ಯ ಹೂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗಲೂ ಚುನಾವಣೆಗೆ ಸಿದ್ಧರಾಗಿರಬೇಕೆಂದು ಮುಖಂಡರಿಗೆ ಕರೆ ನೀಡುವ ಮೂಲಕ ಪರೋಕ್ಷವಾಗಿ ಮಧ್ಯಂತರ ಚುನಾವಣೆಯ ಮುನ್ಸೂಚನೆ ನೀಡಿದ್ದಾರೆ.

ಬಾದಾಮಿಯಲ್ಲಿ ಲೋಕಸಭಾ ಚುನಾವಣೆಯ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸದ್ಯ ಈಗ ಚುನಾವಣೆ ನಡೆದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ನಾನು ಮಧ್ಯಂತರ ಚುನಾವಣೆಗಾಗಿ ಸಭೆ ಕರೆದಿಲ್ಲ ಎಂದಿದ್ದಾರೆ. ರಾಜಕೀಯ ಪಕ್ಷವಾಗಿ ಯಾವಾಗಲು ಚುನಾವಣೆಗೆ ತಯಾರಿರಬೇಕು. ಚುನಾವಣೆಗೆ ಸಿದ್ಧರಾಗಿರಿ ಎಂದು ಹೇಳಿದ್ದಾರೆ. ನನ್ನ ವರ್ಚಸ್ಸು ಕಡಿಮೆಯಾಗಿದೆ ಮಾಜಿ ಮಂತ್ರಿ ಶ್ರೀರಾಮುಲು ಹೇಳಿದ್ದಾರೆ. ಇದನ್ನು ಹೇಳಲು ಅವರ್ಯಾರು? ಇದನ್ನೆಲ್ಲಾ ಜನ ನಿರ್ಧರಿಸುತ್ತಾರೆ ಎಂದಿದ್ದಾರೆ.

ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮತ್ತು ಸಮನ್ವಯ ಸಮಿತಿಯ ಅಧ್ಯಕ್ಷನಾಗಿದ್ದೇನೆ, ಪ್ರತ್ಯೇಕವಾಗಿ ಅಹಿಂದ ಸಂಘಟನೆಯನ್ನು ಮಾಡುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡೇ ಅಹಿಂದ ವರ್ಗಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.