ಬೆಂಗಳೂರು(ಡಿ:೨೯): ೨೦೧೬ ಆಹ್ಹ್ಗೂ ೧೭ನೇ ಸಾಲಿನ ವಿಧಾನ ಮಂಡಲ ಚಳಿಗಾಲ ಅಧಿವೇಶನದಲ್ಲಿ ದುಂದು ವೆಚ್ಚ ಮಾಡಿದ ಆರೋಪದ ಹಿನ್ನಲೆಯಲ್ಲಿ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಸ್. ಮೂರ್ತಿ ಅವರನ್ನು ಅಮಾನತು ಮಾಡಲಾಗಿದೆ.
ಅಕ್ರಮದ ಹಿನ್ನಲೆ ಪರಿಶೀಲಿಸಲು ರಾಜ್ಯ ಲೆಕ್ಕ ಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆ ಹೆಚ್ಚುವರಿ ನಿರ್ದೇಶಕ ಎನ್. ಬಿ ಶಿವರುದ್ರಪ್ಪ ನೇತೃತ್ವದಲ್ಲಿ ಐದು ತಂಡವನ್ನು ರಚಿಸಲಾಗಿತ್ತು. ಈ ತಂಡ ಸಲ್ಲಿಸಿರುವ ವರದಿ ಅನುಸಾರ ಕ್ರಮ ಜರುಗಿಸಲಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ .
ಕೆಲವು ಸೇವೆಗಳಿಗೆ ಎರಡೆರಡು ಬಾರಿ ಬಿಲ್ ಪಾವತಿ ಮಾಡಲಾಗಿದೆ ಎಂದು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ .