ಕಲಬುರ್ಗಿ(ಜ:10): ಕಲಬುರ್ಗಿ ನಗರದಲ್ಲಿ ಗುರುವಾರ ಹಾಡು ಹಗಲೇ ವ್ಯಕ್ತಿಯೋರ್ವನ ಬರ್ಬರ ಹತ್ಯೆ ನಡೆದಿದೆ. ಮೇಲ್ಕುಂದದ ನಿವಾಸಿ ಮಲ್ಲಿಕಾರ್ಜುನ್ ಹತ್ಯೆಗೀಡಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಹೊಂಚು ಹಾಕಿ ಕುಳಿತಿದ್ದ ಇಬ್ಬರು ದುಷ್ಕರ್ಮಿಗಳು ಮಲ್ಲಿಕಾರ್ಜುನ್ ನನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ.

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಶಂಕಿಸಲಾಗಿದ್ದು,ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.