ಶಿವಮೊಗ್ಗ (ಏ. 3)ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧುಬಂಗಾರಪ್ಪ ಇಂದು ನಾಮಪತ್ರ ಸಲ್ಲಿಸಿದರು.

ಬೃಹತ್ ಮೆರವಣಿಗೆಯಲ್ಲಿ ಬಂದ ಮಧು ಬಂಗಾರಪ್ಪ ಜೆಡಿಎಸ್ ಪಕ್ಷದ ಚಿಹ್ನೆಯಲ್ಲಿ ಮೈತ್ರಿ ಅಭ್ಯರ್ಥಿ ಆಗಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ,ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್,ಮಾಜಿ ಸಚಿವ ಕಾಗೋಡು ತಿಮ್ಮಪ್ಪ,ಹಾಗೂ ಭದ್ರಾವತಿ ಕ್ಷೇತ್ರದ ಶಾಸಕ ಬಿ ಕೆ ಸಂಗಮೇಶ ಉಪಸ್ಥಿತರಿದ್ದರು.ನಾಮಪತ್ರ ಸಲ್ಲಿಕೆ ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಸಹಸ್ರಾರು ಕಾರ್ಯಕರ್ತರು ಈ ಸಂದರ್ಭದಲ್ಲಿ ಬಾಗವಹಿಸಿದ್ದರು.ಚುನಾವಣಾಧಿಕಾರಿ ದಯಾನಂದ್ ರವರು ನಾಮಪತ್ರವನ್ನು ಸ್ವೀಕರಿಸಿದರು.