ಮುಂಬೈ(ಜ:05): ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಜೀವನವನ್ನು ಆಧಾರವಾಗಿಟ್ಟುಕೊಂಡು ‘ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಎಂಬ ಚಿತ್ರದ ಬಗ್ಗೆ ವಿವಾದ ಸೃಷ್ಟಿಯಾಗಿರುವ ಬೆನ್ನಲ್ಲೇ ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ಮನಮೋಹನ್ ಸಿಂಗ್ ಅವರನ್ನು ಶ್ಲಾಘಿಸಿದ್ದಾರೆ.

ಮನಮೋಹನ್ ಸಿಂಗ್ ಅವರು ಆಕಸ್ಮಿಕ ಪ್ರಧಾನಿಯಲ್ಲ,ಅವರು ಒಬ್ಬ ಯಶಸ್ವಿ ಪ್ರಧಾನಿಯಾಗಿದ್ದರು. ದೇಶವನ್ನು ಆಳಿದ ಪ್ರಧಾನಿಗೆ ಎಲ್ಲರೂ ಗೌರವ ಕೊಡಬೇಕು ಎಂದು ರಾವತ್ ಹೇಳಿದ್ದಾರೆ.