ಪಣಜಿ(ಮಾ:18): ವಿಧಿವಶರಾಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 5 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪರಿಕ್ಕರ್ ಅವರು ಭಾನುವಾರ ಸಂಜೆ 6:40ಕ್ಕೆ ವಿಧಿವಶರಾದರು.

ಅವರ ಅಂತಿಮ ಸಂಸ್ಕಾರವನ್ನು ಪಣಜಿಯ ಮಿರಾಮಾರ್ ನಲ್ಲಿ ನೆರವೇರಿಸಲಾಗುತ್ತದೆ ಎಂದು ಬಿಜೆಪಿಯ ವಕ್ತಾರರು ಮಾಹಿತಿ ನೀಡಿದ್ದಾರೆ.ಸಂಜೆ 4 ಗಂಟೆಯ ವರೆಗೆ ಪಣಜಿಯ ಕಲಾ ಅಕಾಡಮಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪರಿಕ್ಕರ್ ಅವರ ಅಂತ್ಯಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ,ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ,ಗೃಹ ಸಚಿವ ರಾಜನಾಥ್ ಸಿಂಗ್,ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಬಿಜೆಪಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂಬುದು ತಿಳಿದು ಬಂದಿದೆ.