ಲಕ್ನೋ(ಮಾ:20): ಬಹುಜನ ಸಮಾಜ ಪಕ್ಷದ ವರಿಷ್ಠೆ ಮಾಯಾವತಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ,ಬದಲಾಗಿ ಸಾರ್ವತ್ರಿಕ ಚುನಾವಣೆಯಲ್ಲಿ ಬಿ ಎಸ್ ಪಿ ಹಾಗೂ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತೇನೆಂದು ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಚುನಾವಣಾ ಅಖಾಡದಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ನಿರ್ಧಾರವನ್ನು ನನ್ನ ಪಕ್ಷ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ. ನಮ್ಮ ಮೈತ್ರಿಕೂಟ ಉತ್ತಮವಾಗಿ ಕಾರ್ಯನಿರ್ವಹಿಸಲಿದೆ ಎಂಬ ನಂಬಿಕೆ ಇದೆ. ಸ್ಪರ್ಧೆಯ ನಿರ್ಧಾರದ ಬಗ್ಗೆ ನಂತರ ತೀರ್ಮಾನ ಕೈಗೊಳ್ಳುವುದಾಗಿ ಮಾಯಾವತಿ ವಿವರಿಸಿದ್ದಾರೆ.