ಮಂಗಳೂರು(ಜೂನ್.12) ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಹಾಯಕ ಎಂಜನಿಯರ್ ಎಸ್.ಮಹದೇವಪ್ಪ ಅವರ ಮನೆಯ ಮೇಲೆ ಮತ್ತು ಅವರ ಕಚೇರಿಯ ಮೇಲೆ ಬುಧವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿಯನ್ನು ಮಾಡಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಕುರಿತಾಗಿ ಶೋಧಕಾರ್ಯವನ್ನು ನಡೆಸಿದ್ದಾರೆ.

ಮಂಗಳೂರಿನಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಮಹದೇವಪ್ಪನವರು ಸಹಾಯಕ ಎಂಜನಿಯರ್ ಹುದ್ದೆಯಲ್ಲಿದ್ದಾರೆ. ಇವರ ಕಚೇರಿ ಮತ್ತು ಮನೆಗಳ ಮೇಲೆ ಅಧಿಕಾರಿಗಳು ದಾಳಿಯನ್ನು ನಡೆಸಿದ್ದದಾರೆ.

ಪಶ್ಚಿಮ ವಲಯದ ಎಸಿಬಿ ಎಸ್.ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ದಾಳಿ ನಡೆದಿದೆ.