ಯಾದಗಿರಿ(ಜ:10): ಯಾದಗಿರಿಯ ಸುರಪುರದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕ್ರಿಮಿನಾಶಕ ಬೆರೆಸಿದ ಘಟನೆ ನಡೆದಿದೆ. ನೀರಿನ ಟ್ಯಾಂಕ್ ನಲ್ಲಿ ಅರ್ಧ ಲೀಟರ್ ನಷ್ಟು ಕ್ರಿಮಿನಾಶಕ ಬೆರೆಸಿದ್ದಾರೆ ಎನ್ನಲಾಗಿದೆ.

ನೀರಿನಲ್ಲಿ ದುರ್ವಾಸನೆ ಬರುತ್ತಿದ್ದನ್ನು ಗಮನಿಸಿದ ಗ್ರಾಮದ ಪಂಪ್ ಆಪರೇಟರ್ ಮೌನೇಶ್ ಹಾಗೂ ಅವರ ತಾಯಿ ನಾಗಮ್ಮ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೀರು ಸೇವಿಸದಂತೆ ಗ್ರಾಮದಲ್ಲಿ ಪ್ರಕಟಣೆ ಮಾಡಲಾಗಿದ್ದು,ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.