ಬೆಂಗಳೂರು:(ಫೆ22): ಇಂದಿನಿಂದ ಬಿಜೆಪಿಯವರ “ಮೋದಿ ವಿಜಯ ಸಂಕಲ್ಪ ಯಾತ್ರೆ” ಪ್ರಾರಂಭವಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚಾಲನೆ ನೀಡಲಿದ್ದಾರೆ.

ಚಿಕ್ಕಬಳ್ಳಾಪುರದಿಂದ ಆರಂಭವಾದ ಮೋದಿ ವಿಜಯ ಸಂಕಲ್ಪ ಯಾತ್ರೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಈ ಯಾತ್ರೆ ಸಾಗಲಿದೆ. ಫೆ22 ರಂದು ಆರಂಭವಾದ ಮೋದಿ ವಿಜಯ ಸಂಕಲ್ಪ ಯಾತ್ರೆ ಚಿಕ್ಕಮಗಳೂರಿನಲ್ಲಿ ಮಾರ್ಚ್ 21 ರಂದು ಕೊನೆಗೊಳ್ಳಲಿದೆ.

ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಯಾತ್ರೆಯನ್ನು ಮಾಡಲಾಗುತ್ತಿದ್ದು, ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಲಿದೆ. ಇದರಲ್ಲಿ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಲ್ಲಿದ್ದಾರೆ. ಪ್ರಧಾನಿ ಮೋದಿ ಅವರು ದೇಶದಾದ್ಯಂತ ಇರುವ ಬೂತ್ ಕಾರ್ಯಕರ್ತರೊಂದಿಗೆ ಫೆ 28 ರಂದು ಏಕಕಾಲಕ್ಕೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.