ಬೆಂಗಳೂರು(ಜೂನ್.08) ಕೇರಳದ ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಮೋಡ ಕವಿದ ವಾತಾವರಣವಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ಮುಂಗಾರು ಮಳೆ ಪ್ರವೇಶವಾಗಲಿದೆ. ಜೂನ್ 9 ರಿಂದ 11 ರವರೆಗೆ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆಯು ತಿಳಿಸಿದೆ.

ಕೇರಳದ ಉತ್ತರ ಭಾಗದಲ್ಲಿ ಅತಿಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕೇರಳದ ತಿರುವನಂತಪುರಂ, ಕೊಲ್ಲಮ್, ಎರ್ನಾಕುಲಮ್ ಮತ್ತು ತ್ರಿಶೂಲ್ ನಲ್ಲಿ ಜೂನ್ 9 ಮತ್ತು 10 ರಂದು ಭಾರೀ ಮಳೆಯಾಗಲಿದೆ ಎನ್ನಲಾಗಿದೆ. ಕರಾವಳಿ ಭಾಗದಲ್ಲಿ 35 ರಿಂದ 45 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ.

ಕರ್ನಾಟಕದ 4 ಜಿಲ್ಲೆಗಳಿಗೂ ಕೂಡ ಮುಂಗಾರು ಪ್ರವೇಶವಾಗುವ ಭೀತಿ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಮೈಸೂರು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಲಾಗಿದೆ.