ಮೈಸೂರು(ಜ:07): ಕೇಂದ್ರ ಕಾರ್ಮಿಕ ಸಂಘಟನೆ ಕರೆ ನೀಡಿರುವ ಭಾರತ್ ಬಂದ್ ಗೆ ಮೈಸೂರು ವಿಭಾಗದ ಅಂಚೆ ನೌಕರರ ಸಂಘ ಬೆಂಬಲ ನೀಡಿ ಪಾಲ್ಗೊಳ್ಳಲಿದೆ. ಇದರಿಂದ ಎರಡು ದಿನಗಳ ಕಾಲ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಮೈಸೂರು ವಿಭಾಗದ ಕಾರ್ಯದರ್ಶಿ ಸುಂದರಯ್ಯ ತಿಳಿಸಿದ್ದಾರೆ.

ಮೈಸೂರು ವಿಭಾಗದಲ್ಲಿ ಒಟ್ಟು 65 ಅಂಚೆ ಕಚೇರಿಗಳಿವೆ. ಈ ಎಲ್ಲಾ ಕಚೇರಿಯ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆ ಕಚೇರಿಯ ಕಾರ್ಯವನ್ನು ಸಂಪೂರ್ಣ ಸ್ಥಗಿತಗೊಳ್ಳಿಸಲಿದ್ದು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ವಾರಕ್ಕೆ 5 ದಿನಗಳ ಕಾಲ ಕೆಲಸದ ಪದ್ಧತಿ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂಬುದು ಈ ಪ್ರತಿಭಟನೆಯ ಉದ್ದೇಶ ಎಂದು ತಿಳಿಸಿದ್ದಾರೆ.