ಶಿಮ್ಲಾ(ಅ.02) ಜಗತ್ತಿನ ಅತೀ ಉದ್ದದ ಸುರಂಗ ಮಾರ್ಗವಾದ ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಅಟಲ್ ಟನಲ್ ಅನ್ನು ದೇಶದ ಪ್ರಧಾನಿ ನರೇಂದ್ರಮೋದಿ ಅವರು ಇಂದು ಉದ್ಘಾಟನೆ ಮಾಡಿದರು.
ಈ ಐತಿಹಾಸಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್ ರಾವತ್ , ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರೂ ಭಾಗವಹಿಸಿದ್ದರು.
ಮನಾಲಿಯನ್ನು ಲೇಹ್ಗೆ ಸಂಪರ್ಕಿಸುವ 9.02 ಕಿ.ಮೀ ಉದ್ದದ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. ಈ ಮಾರ್ಗ ಮನಾಲಿ-ಲೇಹ್ ನಡುವಿನ 46. ಕಿ.ಮೀ ದೂರವನ್ನು ಕಡಿಮೆಗೊಳಿಸುವದರ ಜೊತೆಗೆ, ನಾಲ್ಕರಿಂದ ಐದು ಗಂಟೆಗಳವರೆಗೆ ಪ್ರಯಾಣದ ಅವಧಿಯನ್ನು ಕಡಿತಗೊಳಿಸಲಿದೆ.
ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 10,000 ಅಡಿ ಎತ್ತರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಈ ಸುರಂಗವನ್ನು ನಿರ್ಮಿಸಲಾಗಿದೆ. ಈ ಸುರಂಗ 10 ವರ್ಷಗಳಲ್ಲಿ ಪೂರ್ಣಗೊಳಿಸಲಾಗಿದೆ.