ಮಂಗಳೂರು(ಜೂನ್.10)ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂಗಾರು ಮಳೆ ಮಾಡುತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣ ದಳ ಸೋಮವಾರ ಮಂಗಳೂರಿಗೆ ಬಂದಿಳಿದಿದ್ದಾರೆ.

ಆಂದ್ರಪ್ರದೇಶದ ವಿಜಯವಾಡ ಜಿಲ್ಲೆಯಿಂದ 30 ಜನರ ತಂಡವು ಬಂದಿಳಿದಿದ್ದು, 3 ತಿಂಗಳುಗಳ ಕಾಲ ಮಂಗಳೂರಿನಲ್ಲಿಯೇ ವಾಸ್ತವ್ಯವನ್ನು ಹೂಡಲಿದ್ದಾರೆ. ಕರಾವಳಿ ಭಾಗದಲ್ಲಿ ಪ್ರಕೃತಿ ವಿಕೋಪವಾದರೆ ಈ ತಂಡವು ಕಾರ್ಯನಿರ್ವಹಿಸಲಿದೆ.

ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಮಡಿಕೇರಿಯಲ್ಲಿ ಕೊನೆಯ ಬಾರಿ ಪ್ರಕೃತಿ ವಿಕೋಪವಾದಾಗ ಇದೇ ರಾಷ್ಟ್ರೀಯ ಪ್ರಕೃತಿ ವಿಕೋಪ ನಿರ್ವಹಣ ತಂಡ ಕಾರ್ಯಚರಣೆ ನಿರ್ವಹಿಸಿ ಹಲವಾರು ಜನರನ್ನು ರಕ್ಷಣೆ ಮಾಡಿತ್ತು.