ಮಂಡ್ಯ(ಜ:10): ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕೆ ಇಳಿಸುವಂತೆ ಸ್ಥಳೀಯ ಜೆಡಿಎಸ್ ನಾಯಕರು ಪಕ್ಷದ ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ಜಿ.ಪಂ ಸದಸ್ಯರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಮಂಡ್ಯ ಜೆಡಿಎಸ್ ಭದ್ರಕೋಟೆಯಾಗಿದ್ದು,ನಿಖಿಲ್ ಅವರು ಮಂಡ್ಯ ಜನತೆಯ ಜೊತೆ ಉತ್ತಮ ಸಂಪರ್ಕ ಹೊಂದಿದ್ದಾರೆ ಹೀಗಾಗಿ ಅವರನ್ನೇ ಮುಂಬರುವ ಲೋಕಸಭಾ ಚುನಾವಣಾ ಅಭ್ಯರ್ಥಿ ಮಾಡಬೇಕೆಂದು ಒತ್ತಾಯಿಸಿದರು.