ಹುಬ್ಬಳ್ಳಿ(ಮಾ:20): ಕಟ್ಟಡ ಕುಸಿತ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಇದ್ದರೂ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹೇಳಿದ್ದಾರೆ. ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ಮಾತನಾಡಿದ ಅವರು ಸದ್ಯ ಭದ್ರತಾ ಕಾರ್ಯಾಚರಣೆಯ ಬಗ್ಗೆಯಷ್ಟೇ ಎಲ್ಲರೂ ತಲೆಕೆಡಿಸಿಕೊಂಡಿದ್ದೇವೆ,ಎಲ್ಲಾ ಮುಗಿದ ಬಳಿಕ ಘಟನೆಯ ಪ್ರಾಥಮಿಕ ವರದಿಯನ್ನು ಆಧರಿಸಿ ಯಾವ ರೀತಿ ತನಿಖೆ ನಡೆಸಬೇಕೆಂಬುದನ್ನು ತೀರ್ಮಾನಿಸಲಾಗುವುದು ಎಂದಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿ. ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡುವಂತೆ ನಾನು ಜಿಲ್ಲಾಧಿಕಾರಿಗೆ ಸೂಚಿಸುತ್ತೇನೆ. ಒಟ್ಟಿನಲ್ಲಿ ಗಾಯಾಳುಗಳ ಚಿಕಿತ್ಸೆ ಯಾವುದೇ ಕೊರತೆ ಇಲ್ಲದಂತೆ ನಡೆಯಬೇಕು’ ಎಂದು ಕಿಮ್ಸ್‌ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಅವರಿಗೆ ದೇಶಪಾಂಡೆ ಸೂಚಿಸಿದ್ದಾರೆ.