ಬೆಳಗಾವಿ(ಡಿ.19): ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸುವಂತೆ ಸ್ವಾಮೀಜಿಗಳ ನಿಯೋಗವೊಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನ ಸುವರ್ಣ ಸೌಧದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ ಇದಕ್ಕೆ ಸಿಎಂ ನಿಮ್ಮ ಭಾಗದ ಶಾಸಕರು ಮತ್ತು ಮುಖಂಡರ ಜೊತೆ ಸಮಾಲೋಚನೆ ಮಾಡಿಕೊಂಡು ಬರುವಂತೆ ಸೂಚನೆ ನೀಡಿದ್ದಾರೆ.

ಇವರ ಮನವಿಗೆ ಕುಮಾರಸ್ವಾಮಿ ಸ್ಪಂದಿಸಿದ್ದರು ಸಹ ಬೆಲೆ ನೀಡದ ಸ್ವಾಮೀಜಿಗಳು ಉತ್ತರ ಕರ್ನಾಟಕದ ಪ್ರತೀ ಜಿಲ್ಲೆ, ತಾಲೂಕುಗಳಲ್ಲೂ ಉಗ್ರ ಹೋರಾಟ ನಡೆಸುತ್ತೇವೆಂದು ಎಚ್ಚರಿಕೆ ನೀಡಿದ್ದಾರೆ.

ಇನ್ನೂ ಉತ್ತರ ಕರ್ನಾಟಕ ಪ್ರತ್ಯಕ ರಾಜ್ಯ ಕುರಿತು ಪರ ವಿರೋದ ಚರ್ಚೆಗಳು ನಡೆಯುತ್ತಿವೆ.