ಲಖನೌ(ಡಿ.24): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರು ನೆರೆದಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾರು ರಾಮ ಮಂದಿರ ನಿರ್ಮಾಣ ಮಾಡುತ್ತಾರೋ ಅವರಿಗೆ ಜನ ಮತ ಹಾಕಲಿದ್ದಾರೆ. ರಾಮ ಮಂದಿರ ನಿರ್ಮಾಣ ನಮ್ಮಿಂದ ಮಾತ್ರ ಸಾಧ್ಯ ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ ಆದಿತ್ಯನಾಥ್, ಕೆಲವರು ಜನಿವಾರ ಪ್ರದರ್ಶಿಸುತ್ತ, ಗೋತ್ರದ ಬಗ್ಗೆ ಹೇಳಿಕೊಳ್ಳುತ್ತ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.