ಬೆಂಗಳೂರು(ಜು:09): ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಮುಂದಾಗಿರುವ ಮಹಾಲಕ್ಷ್ಮಿ ಲೇಔಟ್‍ನ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ಪಕ್ಷದ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ.

ಮಹಾಲಕ್ಷ್ಮಿಲೇಔಟ್‍ನ ಪ್ರಮುಖರಾದ ಮಾಜಿ ಶಾಸಕ ನೆ.ಲ.ನರೇಂದ್ರ ಬಾಬು, ಬಿಬಿಎಂಪಿ ಮಾಜಿ ಉಪಮೇಯರ್ ಎಸ್.ಹರೀಶ್, ಬಿಬಿಎಂಪಿ ಮಾಜಿ ಸದಸ್ಯ ಎಂ.ನಾಗರಾಜ್, ಮುಖಂಡರಾದ ಸಿ.ರಾಜಣ್ಣ, ಡಾ.ಪ್ರಸನ್ನ ಸೇರಿದಂತೆ ಅನೇಕರು ಗೋಪಾಲಯ್ಯ ಸೇರ್ಪಡೆಗೆ ಅಸಮಾಧಾನ ಹೊರಹಾಕಿದ್ದಾರೆ.

ಈ ಸಂಬಂಧ ಇಂದು ಈ ಎಲ್ಲ ಮುಖಂಡರು ಸಭೆ ಸೇರಿ ಮುಂದಿನ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಗೋಪಾಲಯ್ಯ ಅವರನ್ನು ಪಕ್ಷಕ್ಕೆ ತೆಗೆದುಕೊಳ್ಳುವ ಬಗ್ಗೆ ಪಕ್ಷದ ವರಿಷ್ಠರು ಮತ್ತೊಮ್ಮೆ ಮರುಚಿಂತನೆ ನಡೆಸಬೇಕೆಂದು ಮನವಿ ಮಾಡಲು ತೀರ್ಮಾನಿಸಿದ್ದಾರೆ.