ನವದೆಹಲಿ:(ಜ28): ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ಭರ್ಜರಿಯಾಗಿಯೇ ನಡೆಯುತ್ತಿದ್ದು, ಕೇಂದ್ರ ಚುನಾವಣ ಆಯೋಗ ಸಿದ್ಧತೆ ನಡೆಸಲು ಮುಂದಾಗಿದೆ.

ಪ್ರತಿಯೊಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ, ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳಿಗೆ, ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಅಧಿಕಾರಿಗಳ ವರ್ಗಾವಣೆ ಕುರಿತು ಪತ್ರ ಬರೆಯಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸ ಬೇಕು. ಅಧಿಕಾರಿಗಳು ಅವರ ಜಿಲ್ಲೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದರೆ, ಅಂತಹವರನ್ನು ವರ್ಗಾಯಿಸಬಹುದು ಹಾಗೂ ಒಂದೇ ಜಿಲ್ಲೆಯಲ್ಲಿ ಮೂರು ವರ್ಷ ಕಾರ್ಯನಿರ್ವಹಿಸಿದ್ದರೆ ಅವರನ್ನು ವರ್ಗಾವಣೆ ಮಾಡಬಹುದು ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಒಟ್ಟಾರೆ ಮುಂಬರುವ ಲೋಕಸಭಾ ಚುನಾವಣೆಗೆ ಜೋರಾಗಿಯೇ ತಯಾರಿ ನಡೆಯುತ್ತಿದೆ. ಹಾಗೆಯೇ ಚುನಾವಣಾ ಆಯೋಗದ ನಿಯಮಗಳಿಗೆ ತಕ್ಕಂತೆ ಅಧಿಕಾರಿಗಳು ಕಾರ್ಯನಿರ್ವಹಿಸ ಬೇಕು ಎನ್ನಲಾಗಿದೆ.