ನವದೆಹಲಿ(ಜ.23): ಲೋಕಸಭೆ ಚುನಾವಣೆಗೆ ಇನ್ನು ಎರಡು ತಿಂಗಳುಗಳು ಮಾತ್ರ ಬಾಕಿ ಇದ್ದು, ಪ್ರಿಯಾಂಕ ಗಾಂಧಿ ಮತ್ತೆ ರಾಜಕೀಯಕ್ಕೆ ಮರಳಿದ್ದಾರೆ. ಗಂಡ ರಾಬರ್ಟ್ ವಾದ್ರಾ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿ ಬಂದ ನಂತರ ರಾಜಕಾರಣದಿಂದ ದೂರ ಉಳಿದಿದ್ದ, ಪ್ರಿಯಾಂಕ ಸಡನ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

ಇನ್ನು ಈ ಬಾರಿ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಹುದ್ದೆಯನ್ನು ಅಲಂಕರಿಸುವ ಮೂಲಕ ರಾಜಕೀಯ ರಂಗದಲ್ಲಿ ಅಧಿಕೃತ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಪಕ್ಷ ಸಂಘಟನೆಯಲ್ಲಿ ಅಜ್ಜಿ ಇಂದಿರಾ ಗಾಂಧಿಯವರಂತೆ ವರ್ಚಸ್ಸನ್ನು ಹೊಂದಿದ್ದಾರೆಂಬ ಮಾತುಗಳು ಸಹ ಕೇಳಿಬರುತ್ತಿದ್ದವು, ಒಟ್ಟಾರೆ ಪ್ರಿಯಾಂಕ ರಾಜಕೀಯ ಎಂಟ್ರಿ ಬಾರೀ ಕೂತುಹಲ ಮೂಡಿಸಿದ್ದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಕಾಂಗ್ರೆಸ್ ದಿನಕ್ಕೊಂದು ಅಸ್ತ್ರಗಳನ್ನು ಬಳಸುತ್ತಿದೆ