ಶಿವಮೊಗ್ಗ:(ಜೂನ್.07): ಶಿವಮೊಗ್ಗ ನಗರದ ವಿವಿಧೆಡೆ ಕುಡಿಯುವ ನೀರನ್ನು ಸರಿಯಾಗಿ ಪೂರೈಕೆ ಮಾಡದ ಕಾರಣ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಪೋರೇಟರ್‍ಗಳು ಪ್ರತಿಭಟನೆಯನ್ನು ನಡೆಸಿದ್ದಾರೆ.

ಕುಡಿಯುವ ನೀರನ್ನು ಪೂರೈಕೆಯ ಮಾಡುವ ಹೊಣೆಹೊತ್ತಿರುವ ಕರ್ನಾಟಕ ನೀರು ಸರಬರಾಜು ವಿತರಣಾ ಸಿಬ್ಬಂದಿಗಳಿಗೆ ಹಾಗೂ ಪಂಪ್‍ಹೌಸ್ ಸಿಬ್ಬಂದಿಗಳ ನಡುವೆ ಹೊಂದಾಣಿಕೆಯ ಕೊರತೆಯಿಂದ ನಗರದ ಕೆಲವು ಸ್ಥಳಗಳಿಗೆ ನೀರು ಪೂರೈಕೆ ಮಾಡುವಲ್ಲಿ ತೊಂದರೆ ಉಂಟಾಗುತ್ತಿದೆ ಎನ್ನಲಾಗುತ್ತಿದೆ.

ಇನ್ನೂ ರಾಜ್ಯದಲ್ಲಿ ಮಳೆಯಾಗದ ಕಾರಣ ನೀರಿನ ಸಮಸ್ಯೆ ಕಾಡುತ್ತಿದ್ದು, ಇದರಿಂದ ಪಾಲಿಕೆಯ ಇತರ ಯೋಜನೆಗಳ ಅಡಿ ಕೊಳವೆ ಬಾವಿಯನ್ನು ನಿರ್ಮಾಣ ಮಾಡುವುದರ ಜೊತೆಗೆ ನೀರಿನ ಕೊರತೆಗಳಿರುವ ಬಡಾವಣೆಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕೆಂದು ಒತ್ತಾಯಿಸಲಾಗಿದೆ.

ಈ ಪ್ರತಿಭಟನೆಯಲ್ಲಿ ಪಾಲಿಕೆಯ ಸದಸ್ಯರಾದ ರೇಖಾ ರಂಗನಾಥ್, ಹೆಚ್.ಸಿ.ಯೋಗೇಶ್, ಬಿ.ಎ. ರಮೇಶ್ ಹೆಗ್ಡೆ, ನಾಗರಾಜ್ ಕಂಕಾರಿ ಸೇರಿದಂತೆ ಇತರರು ಹಾಜರಿದ್ದರು.