ಬೆಂಗಳೂರು(ಆಗಸ್ಟ್.20) ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 25 ದಿನಗಳು ಬಳಿಕ ಸಚಿವ ಸಂಪುಟವನ್ನು ರಚಿಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಈ ಸಂಪುಟದಲ್ಲಿ ಸಚಿವ ಸ್ಥಾನ ಸಿಗದವರು ನಿರಾಶರಾಗಬಾರದು ಎಂದು ಆರ್.ಅಶೋಕ್ ತಿಳಿಸಿದ್ದಾರೆ.

ನೂತನ ಸಚಿವರಾಗಿ ಪ್ರಮಾಣವಚನವನ್ನು ಸ್ವೀಕರಿಸುವ ಮುನ್ನ ಮಾತನಾಡಿದ ಅಶೋಕ್ ಅವರು ಮುಂದಿನ ದಿನಗಳಲ್ಲಿ ಎಲ್ಲರಿಗೂ ಅವಕಾಶ ಸಿಗಲಿದೆ. ಮೊದಲ ಹಂತದಲ್ಲಿ ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರೂ ಕೂಡ ನಿರಾಶರಾಗಬಾರದು. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡದೆ ಎಲ್ಲರನ್ನು ಒಗ್ಗೂಡಿಸಿ ಸರ್ಕಾರವನ್ನು ಮುನ್ನಡೆಸುತ್ತೇವೆ ಎಂದು ಹೇಳಿದರು.

ನನಗೆ ಮಂತ್ರಿ ಸ್ಥಾನ ಹೊಸದೇನೂ ಅಲ್ಲ. ಈ ಹಿಂದೆ ಉಪಮುಖ್ಯಮಂತ್ರಿ, ಗೃಹ, ಸಾರಿಗೆ ಇಲಾಖೆಗಳ ಜವಾಬ್ದಾರಿಯನ್ನು ಪಕ್ಷ ನನಗೆ ನೀಡಿತ್ತು. ನನಗೆ ಕೊಟ್ಟ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡುತ್ತೇನೆ ಎಂದು ಹೇಳಿದರು.