ಬೆಂಗಳೂರು(ಡಿ:೨೯): ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಮಾಡಿದ ಹಿನ್ನಲೆಯಲ್ಲಿ ರಾಜಾಜಿನಗರದ ವೈದ್ಯಕೀಯ ಕಾಲೇಜ್ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.
ರ‍್ಯಾಗಿಂಗ್ ನಡೆದಿದೆ ಎಂದು ಪ್ರಥಮ ವರ್ಷದ ವಿದ್ಯಾರ್ಥಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನಲೆಯಲ್ಲಿ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ .

ಆ ಐವರು ಆರೋಪಿಗಳ ಮೇಲೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಕರ್ನಾಟಕ ಶಿಕ್ಷಣಕಾಯ್ದೆ 1983ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ರ‍್ಯಾಗಿಂಗ್ ನಡೆದ ವೇಳೆ ಆ ವಿದ್ಯಾರ್ಥಿಗಳು ಮದ್ಯ ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದ್ದು ವಿದ್ಯಾರ್ಥಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ .