ನವದೆಹಲಿ:(ಜೂನ್.17): 17 ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಮೊದಲ ದಿನದ ಅಧಿವೇಶನಕ್ಕೆ ಗೈರಾಗಿದ್ದಾರೆ.

ಇಂದು ನೂತನ ಸಂಸದರು ಸಂಸತ್ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನೂ ಲೋಕಸಭೆಯ ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ಅಧ್ಯಕ್ಷರು ಕಂಡುಬಾರದೆ ಇರುವುದರಿಂದ ಬಿಜೆಪಿ ಅವರು ಪ್ರಶ್ನಿಸಿದ್ದಾರೆ.

ಬಿಜೆಪಿಯ ಐಟಿ ಘಟಕದ ಮುಖ್ಯಸ್ಥರು ರಾಹುಲ್‍ಗಾಂಧಿ ಬರದೇ ಇರುವುದನ್ನು ಪ್ರಶ್ನಿಸಿದ್ದಾರೆ. ರಾಹುಲ್‍ಗೆ ಪ್ರಜಾಪ್ರಭುತ್ವದ ಬಗ್ಗೆ ಗೌರವವಿದೆಯೇ ಎಂದು ಹೇಳಲಾಗಿದೆ.

ಪಕ್ಷದವತಿಯಿಂದ ರಾಹುಲ್ ಸದನಕ್ಕೆ ಹಾಜರಾಗದಿರುವುದರ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.