ಬೆಂಗಳೂರು(ಮಾ:16):ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 18 ರಂದು ಬೆಂಗಳೂರುಗೆ ಪ್ರವಾಸ ಕೈಗೊಳ್ಳಲಿದ್ದು,ಸಾಫ್ಟ್ ವೇರ್ ಇಂಜಿನಿಯರ್ ಗಳ ಜೊತೆ ನಗರದಲ್ಲಿ ಸಂವಾದ ನಡೆಸಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಕಲಬುರ್ಗಿಗೆ ಗೆ ಆಗಮಿಸಲಿರುವ ರಾಹುಲ್ ಗಾಂಧಿ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ನಂತರ ಕಲಬುರ್ಗಿ ಇಂದ ಬೆಂಗಳೂರಿಗೆ ಆಗಮಿಸಿ ಸಂಜೆ 5 ಗಂಟೆ ಸುಮಾರಿಗೆ ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಸಭಾಂಗಣದಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಗಳು ಸೇರಿದಂತೆ ವಿವಿಧ ಕ್ಷೇತ್ರಗಳ ತಜ್ಞರ ಜೊತೆ ಸಂವಾದ ನಡೆಸಲಿದ್ದಾರೆ.

ಐಟಿ ಬಿಟಿ ರಾಜಧಾನಿ ಎಂದೇ ಹೆಸರಾಗಿರುವ ಬೆಂಗಳೂರಿನಲ್ಲಿ ಅತಿ ಹೆಚ್ಚು ಸಾಫ್ಟ್ ವೇರ್ ಇಂಜಿನಿಯರ್ ಗಳಿದ್ದು,ಅವರ ಮನಒಲಿಸಲು ರಾಹುಲ್ ಗಾಂಧಿ ಮುಂದಾಗಿದ್ದಾರೆ. ವಿದ್ಯಾವಂತ ವರ್ಗದವರು ಬಿಜೆಪಿ ಗೆ ಹೆಚ್ಚು ಬೆಂಬಲ ನೀಡುತ್ತಿದ್ದು,ಇದಕ್ಕಾಗಿ ರಾಹುಲ್ ಗಾಂಧಿ ಈ ಕ್ಷೇತ್ರದ ಉದ್ಯೋಗಿಗಳ ಜೊತೆ ಚರ್ಚೆಗೆ ಮುಂದಾಗಿರುವುದು ಕುತೂಹಲ ಕೆರಳಿಸಿದೆ.